Breaking News

ನಟ ದರ್ಶನ್ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಹೋಗಲು ತೀರ್ಮಾನಿಸಿರುವ ನಗರ ಪೊಲೀಸರು,

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ನಗರದ ಪೊಲೀಸರು ನಿರ್ಧರಿಸಿದ್ದಾರೆ‌.

ರೇಣುಕಾಸ್ವಾಮಿ ಹತ್ಯೆಯಾಗಿ ಸುಮಾರು 6 ತಿಂಗಳ ಬಳಿಕ ನಟ ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಶುಕ್ರವಾರ (ಡಿ.15) ಜಾಮೀನು ಮಂಜೂರಾಗಿತ್ತು‌. ಇದರಂತೆ ಸೋಮವಾರ ನ್ಯಾಯಾಲಯಕ್ಕೆ ಜಾಮೀನು ಶ್ಯೂರಿಟಿ ಒದಗಿಸಿದ್ದ ಪವಿತ್ರಾ ಗೌಡ, ಪ್ರದೂಷ್, ನಾಗರಾಜ್ ಇನ್ನಿತರರು ಜೈಲಿನಿಂದ ಮಂಗಳವಾರ (ಇಂದು) ಬಿಡುಗಡೆಯಾಗಿದ್ದಾರೆ.

ಸದ್ಯ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಹೋಗಲು ತೀರ್ಮಾನಿಸಿರುವ ನಗರ ಪೊಲೀಸರು, ಈ ಕುರಿತಂತೆ ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ‌. ಪೂರ್ವಾನುಮತಿ ದೊರೆತ ಬಳಿಕ ಸುಪ್ರೀಂನಲ್ಲಿ ಪ್ರಶ್ನಿಸುವುದಾಗಿ ಆಯುಕ್ತ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ