Breaking News

ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ: “ಇಂದು ಸುವರ್ಣಸೌಧ ವೀಕ್ಷಣೆಗೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಗೃಹಲಕ್ಷ್ಮಿಯರು ಬಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ‌ಹಾಗೂ ಉಪಮುಖ್ಯಮಂತ್ರಿ ಕಾರ್ಯ ವೈಖರಿಯನ್ನು ನೋಡಲು ಅವರನ್ನು ಸುವರ್ಣ ಸೌಧಕ್ಕೆ ಆಗಮಿಸಿ ಸಂತಸ ವ್ಯಕ್ತಪಡಿಸಿದ್ದಾರೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಅವರು ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದ ಪ್ರತಿಯೊಬ್ಬ ಮಹಿಳೆಗೂ ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗಬೇಕು ಎನ್ನುವುದು ನಮ್ಮ ಉದ್ದೇಶವಾಗಿತ್ತು. ನೇರವಾಗಿ ಮಹಿಳೆಯರ ಬ್ಯಾಂಕ್​ ಖಾತೆಗೆ ಎರಡು ಸಾವಿರ ರೂಪಾಯಿ ಹಾಕುವ ಯೋಜನೆಯು ನಮ್ಮ ಕನಸಿನ ಕೂಸಾಗಿತ್ತು. ಈ ಯೋಜನೆಯು ರಾಜ್ಯಾದ್ಯಂತ ಯಶಸ್ಸು ಕಂಡಿದೆ. ಈ ಹಣದಿಂದ ರಾಜ್ಯದ ವಿವಿಧ ಕಡೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ಜನರಿಗೆ ಅನುಕೂಲವಾಗಿದೆ. ಗ್ರಂಥಾಲಯ, ರೈತರ ಒಕ್ಕಲುತನಕ್ಕೆ ಎತ್ತು, ಬೋರ್​ವೆಲ್ ಕೊರೆಯುವುದು, ರಥವನ್ನು ತಯಾರಿಸುವುದು, ಮಕ್ಕಳ ಶಿಕ್ಷಣಕ್ಕೆ ಸಹಾಯವಾಗುವುದರ ಜೊತೆಗೆ ಅತ್ತೆಯ- ಮಾವಂದಿರ ಕಣ್ಣಿನ ಆಪರೇಷನ್ ಮಾಡಿಸುವಷ್ಟು ಈ ಯೋಜನೆಯು ಸಫಲತೆ ಕಂಡಿದೆ” ಎಂದು ಸಂತಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ