Breaking News

ಸದನದಲ್ಲಿ ಅವಾಚ್ಯ ಪದ ಬಳಕೆ ವಿಚಾರ ಯಾರೂ ಖಂಡಿಸದೇ ಇರುವುದು ನೆನೆದು ಗದ್ಗದಿತರಾದ ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ: ನಿನ್ನೆ ವಿಧಾನಪರಿಷತ್​ನಲ್ಲಿ ನಡೆದ ಘಟನೆ ಸಂಬಂಧ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿದರು. ಸದನದಲ್ಲಿ ಈ ವಿಚಾರ ಯಾರೂ ಖಂಡಿಸದೇ ಇರುವುದನ್ನು ನೆನೆದು ಗದ್ಗದಿತರಾದರು.

ಬಿಜೆಪಿ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಪ್ರಯೋಗದ ಹಿನ್ನೆಲೆ ಇಂದು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ‌ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್​ ಅವರು, “ಡಾ.ಬಿ. ಆರ್. ಅಂಬೇಡ್ಕರ್​ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನಾವು ಸದನದಲ್ಲಿ ಪ್ರತಿಭಟನೆ ಮಾಡುತ್ತಿದ್ದೆವು. ಧರಣಿ ಮಾಡಿ ಮುಗಿದು ನಾವು ಕುಳಿತಿದ್ದೆವು.

ನನ್ನ ಸೀಟ್​ ಮೇಲೆ ಸುಮ್ಮನೆ ಕುಳಿತಿದ್ದೆ. ಆಗ ರಾಹುಲ್​ ಗಾಂಧಿ ಬಗ್ಗೆ ಡ್ರಗ್​ ಎಡಿಕ್ಟ್​ ಅಂತ ಸಿಟಿ ರವಿ ಅವರು ಅಂದರು. ತಾವು ಸಹ ಅಪಘಾತ ಮಾಡಿದ್ದೀರಿ ತಾವೂ ಸಹ ಕೊಲೆಗಾರ ಆಗುತ್ತೀರಿ , ಆಗುತ್ತೀರಾ ಅಂದೆ. ನನಗೆ ಬಳಿಕ ಆ ಶಬ್ದವನ್ನು ಸಿಟಿ ರವಿ ಒಮ್ಮೆ ಅಲ್ಲ, ಹತ್ತು ಬಾರಿ ಹೇಳಿದರು. ನನ್ನ ತೇಜೋವಧೆ ಮಾಡಿದರು. ಇದಕ್ಕೆಲ್ಲ ನಾನು ಹೆದರುವುದಿಲ್ಲ” ಎನ್ನುತ್ತಲೇ ಆ ಘಟನೆ ನೆನೆದು ಲಕ್ಷ್ಮಿ ಹೆಬ್ಬಾಳ್ಕರ್ ಭಾವುಕರಾದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ