ಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿ. ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, “ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ ಇಲ್ಲ” ಎಂದು ಹೇಳಿದರು.
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೇಶದಲ್ಲಿ ಇಂಥ ಘಟನೆಗಳು ಹೊಸದೇನಲ್ಲ. ಸಂಸತ್ತು ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಅವು ಮುಗಿದು ಹೋಗಿವೆ. ಈಗಲೂ ಈ ಪ್ರಕರಣ ಮುಗಿಸೋದು ಒಳ್ಳೆಯದು. ಸಾರ್ವಜನಿಕವಾಗಿ ಈ ಪ್ರಕರಣ ಮುಂದುವರೆಸುವುದು ಅನಾವಶ್ಯಕ” ಎಂದರು.