ಬೆಂಗಳೂರು: ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಪುತ್ರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಬಾಲಕೃಷ್ಣ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ನನ್ನ ಮಗಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ವಿಷಯವನ್ನು ನಿಮ್ಮೆಲ್ಲರ ಗಮನಕ್ಕೆ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಈ ಪ್ರಮುಖ ವಿಚಾರವನ್ನು ತಿಳಿಸಲು ಇಚ್ಛೆ ಪಡುತ್ತೇನೆ. ಎಲ್ಲಾ ನನ್ನ ಆತ್ಮೀಯರಲ್ಲಿ ನನ್ನ ಮನವಿ, ಯಾವುದೇ ಆತಂಕ ಬೇಡ, ದಯವಿಟ್ಟು ಯಾರೂ ಕರೆ ಮಾಡಬೇಡಿ, ಕರೆಗಳನ್ನು ಸ್ವೀಕರಿಸಲು ಆಗುತ್ತಿಲ್ಲ ಎಂದು ವಿನಂತಿಸುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ಹೆಚ್.ಸಿ.ಬಾಲಕೃಷ್ಣ ಬರೆದುಕೊಂಡಿದ್ದಾರೆ.ಇಂದು ಸಚಿವ ಸುಧಾಕರ್ ಅವರ ತಂದೆ ಮತ್ತು ಮನೆಗೆಲಸದವನಿಗೂ ಕೊರೊನಾ ಸೋಂಕು ತಗುಲಿದೆ. ಇಂದು ರಾಜ್ಯದಲ್ಲಿ ಒಟ್ಟು 249 ಮಂದಿಗೆ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ.
Laxmi News 24×7