Breaking News

ಬಿಎನ್​ಎಸ್​ ಪಠ್ಯದಡಿ ಪರೀಕ್ಷೆ ಬರೆಯುವಂತೆ ರಾಜ್ಯ ಕಾನೂನು ವಿವಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಐಪಿಸಿ ಕಾಯ್ದೆ ಪಠ್ಯದಲ್ಲೇ ಪರೀಕ್ಷೆ ನಡೆಸುವಂತೆ ಸೂಚಿಸಿದೆ.

Spread the love

ಬೆಂಗಳೂರು: ಭಾರತೀಯ ದಂಡ ಸಂಹಿತೆ (ಐಪಿಸಿ) ಅಧ್ಯಯನ ಮಾಡಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ಕಾನೂನು ಪದವಿ ವಿದ್ಯಾರ್ಥಿಗಳಿಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಪಠ್ಯ ಕ್ರಮದಲ್ಲಿ ಪರೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಜೊತೆಗೆ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಐಪಿಸಿ ಪಠ್ಯಕ್ರಮದಡಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ ನೀಡಿದೆ.

ಐಪಿಸಿ (ಕ್ರಿಮಿನಲ್ ಲಾ-1) ಅಧ್ಯಯನ ಮಾಡಿ ಅನುತ್ತೀರ್ಣರಾದ ಕಾನೂನು ವಿದ್ಯಾರ್ಥಿಗಳಿಗೂ ಬಿಎನ್‌ಎಸ್ ಪಠ್ಯ ಕ್ರಮದಲ್ಲಿ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಕೆಎಸ್‌ಎಲ್‌ಯು ಡಿಸೆಂಬರ್ 6 ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಚ್ಚಿನ್ ಮತ್ತಿತರ ವಿದ್ಯಾರ್ಥಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಕೆಎಸ್‌ಎಲ್‌ಯು ಹೊರಡಿಸಿದ್ದ ಅಧಿಸೂಚನೆ ರದ್ದುಗೊಳಿಸಿ ಆದೇಶಿಸಿದ್ದು, ಐಪಿಸಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ಬಿಎನ್‌ಎಸ್ ಪಠ್ಯಕ್ರಮದ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಪೀಠ ಹೇಳಿದೆ.

ಅಲ್ಲದೆ, ಬಿಎನ್‌ಎಸ್ ಪಠ್ಯಕ್ರಮ ಜಾರಿಯಾದ ವರ್ಷ ಮತ್ತು ಅದರ ಮುಂದಿನ ವರ್ಷಗಳಲ್ಲಿ ಬಿಎನ್‌ಎಸ್ ಪಠ್ಯಕ್ರಮದಲ್ಲಿ ಪ್ರಶ್ನೆ ಪತ್ರಿಕೆಗೆ ಉತ್ತರಿಸಬಹುದು. ಆದರೆ, ಐಪಿಸಿ ಅಧ್ಯಯನ ಮಾಡಿ, ಅದೇ ಪಠ್ಯಕ್ರಮ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಿಎನ್‌ಎಸ್ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಎಂಬುದನ್ನು ನಿರೀಕ್ಷಿಸಲಾಗದು. ಜೊತೆಗೆ, ಐಪಿಸಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಬಿಎನ್‌ಎಸ್ ಪರೀಕ್ಷೆ ಬರೆಯುವಂತೆ ಒತ್ತಾಯಿಸಬಾರದು ಎಂದು ಪೀಠ ಕೆಎಸ್‌ಎಲ್‌ಯುಗೆ ಸಲಹೆ ನೀಡಿದೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ