Breaking News

ಬೆಳಗಾವಿಯಲ್ಲಿ ಡಿ. 27ರಂದು ಆಯೋಜಿಸಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಯಶಸ್ವಿಗೊಳಿಸಲು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ

Spread the love

ಡಿ .27 ರಂದು ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ

ಚಿಕ್ಕೋಡಿ: ಬೆಳಗಾವಿಯಲ್ಲಿ ಡಿ. 27ರಂದು
ಆಯೋಜಿಸಿರುವ ಕಾಂಗ್ರೆಸ್ ಅಧಿವೇಶನದ
ಶತಮಾನೋತ್ಸವವನ್ನು ಯಶಸ್ವಿಗೊಳಿಸಲು
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು
ಶ್ರಮಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ತಿಳಿಸಿದರು.

ಪಟ್ಟಣದ ಲೋಕಸಭೆ ಸದಸ್ಯರ ಕಚೇರಿ
ಆವರಣದಲ್ಲಿ ಶನಿವಾರ ಕರೆದಿದ್ದ ಚಿಕ್ಕೋಡಿ
ಜಿಲ್ಲಾ ಮಟ್ಟದ ಕಾಂಗ್ರೆಸ್‌ ಮುಖಂಡರ
ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ
ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ
ಮಾತನಾಡಿ, ಮಹಾತ್ಮಾ ಗಾಂಧಿಜಿ ಅವರು
ಕಳೆದ 100 ವರ್ಷಗಳ ಹಿಂದೆ ಬೆಳಗಾವಿಗೆ
ಭೇಟಿ ನೀಡಿದ್ದರು. ಅವರ ಸವಿನೆನಪಿಗಾಗಿ 3
ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು
ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ
ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಲ್ಲಿಯ ಲಕ್ಷಾಂತರ
ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮ
ಯಶಸ್ವಿಗೊಳಿಸಬೇಕೆಂದರು.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ ಮಾತನಾಡಿ,
ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಿಂದ 8
ಸಾವಿರಕ್ಕೂ ಹೆಚ್ಚು ವಾಹನಗಳ ಮೂಲಕ
1 ಲಕ್ಷಕ್ಕೂ ಹೆಚ್ಚು ಜನರು ಬೆಳಗಾವಿಯಲ್ಲಿ
ಮೂರು ದಿನಗಳ ಕಾಲ ನಡೆಯುವ
ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ
ಇದೆ. ಎಲ್ಲರೂ ಸೇರಿ ಕಾಂಗ್ರೆಸ್ ಅಧಿವೇಶನದ
ಶತಮಾನೋತ್ಸವವನ್ನು ಆಚರಿಸೋಣ ಎಂದು
ಹೇಳಿದರು.
ಸಭೆಯಲ್ಲಿ ಮಾಜಿ ಸಚಿವ ವೀರಕುಮಾರ.ಪಾಟೀಲ, ಮಾಜಿ ಶಾಸಕ ಎಸ್ ಬಿ ಘಾಟಗೆ,
ಡಿಸಿಸಿಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ
ಕುಲಗುಡೆ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಶಿವು ಪಾಟೀಲ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಮಹಾವೀರ ಮೋಹಿತೆ, ಕೆಪಿಸಿಸಿ ಕಾರ್ಯದರ್ಶಿ
ಸುಧಾಕರ ಬಡಿಗೇರ, ಜಿಲ್ಲಾ ಪ್ರಧಾನ
ಕಾರ್ಯದರ್ಶಿ ಎಚ್ ಎಸ್ ನಸಲಾಪೂರೆ,
ಡಾ. ಎನ್. ಎ ಮಗದುಮ್, ಅರ್ಜುನ
ನಾಯಿಕವಾಡಿ, ಚಿಕ್ಕೋಡಿ ಜಿಲ್ಲಾ ಮಹಿಳಾ
ಕಾಂಗ್ರೆಸ್, ಅಧ್ಯಕ್ಷೆ ನಿರ್ಮಲಾ ಪಾಟೀಲ
ಮುಂತಾದವರು ಭಾಗವಹಿಸಿದ್ದರು.


Spread the love

About Laxminews 24x7

Check Also

ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ

Spread the loveಬೆಂಗಳೂರು: ಪ್ರಸ್ತುತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಗದು ಬಹುಮಾನ ಘೋಷಿಸಲಾಗಿದೆ. ಬೆಳಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ