Breaking News

ಲಂಚದ ಹಣ ನುಂಗಿ ಭಂಡತನ ಮೆರೆದೆ ಅಧಿಕಾರಿ,ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್​

Spread the love

ಕೊಪ್ಪಳ, : ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ ನುಂಗಿದ ಅಧಿಕಾರಿ ದಸ್ತಗಿರ್ ಅಲಿಗೆ ವಾಂತಿ ಮಾಡಿಸಿ ಲೋಕಾಯುಕ್ತ ಅಧಿಕಾರಿಗಳು ಕಕ್ಕಿಸಿದ್ದಾರೆ.

ಎನ್​ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿಯಲ್ಲಿ ದಸ್ತಗಿರ್ ಅಲಿಯನ್ನು ಟ್ರ್ಯಾಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಲಂಚದ ಹಣ ನುಂಗಿ ಭಂಡತನ ಮೆರೆದೆ ಅಧಿಕಾರಿ

ಲೋಕಾಯುಕ್ತ ಪೊಲೀಸರ ಬಲೆಗೆ ಬೀಳ್ತಿದ್ದಂತೆ ದಸ್ತಗಿರ್ ಅಲಿ ಹೈಡ್ರಾಮಾವೇ ಮಾಡಿದ್ದಾರೆ. ಲಂಚ ಪಡೆದಿದ್ದ ಎರಡು ಸಾವಿರ ರೂಪಾಯಿ ನೋಟನ್ನು ನುಂಗಿ ಸಾಕ್ಷಿನಾಶ ಮಾಡಲು ಯತ್ನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ನೀರು ಕುಡಿಸಿ ವಾಂತಿ ಮಾಡಿಸಿ, ಹಣ ಹೊರಗೆ ತೆಗೆಸಿದ್ದಾರೆ.ಸದ್ಯ ದಸ್ತಗಿರ್ ಅಲಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಯಚೂರು ಲೋಕಾಯುಕ್ತ ಎಸ್ಪಿ ಶಶಿಧರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಕೊಪ್ಪಳ ಲೋಕಾಯುಕ್ತ ಪಿಐ ನಾಗರತ್ನ, ಸುನೀಲ್ ಮೇಗಿಲಮನಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ