ಮ್ಯಾಕ್ಸ್’ ಸಿನಿಮಾ ಮೇಲೆ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದರಲ್ಲೂ ಆ್ಯಕ್ಷನ್ ಇಷ್ಟಪಡುವ ಪ್ರೇಕ್ಷಕರಿಗೆ ಈ ಸಿನಿಮಾದ ಮೇಲೆ ಭಾರಿ ಭರವಸೆ ಇದೆ. ಈ ಚಿತ್ರದ ಟ್ರೇಲರ್ ಇಂದು (ಡಿಸೆಂಬರ್ 22) ಬಿಡುಗಡೆ ಆಗಿದೆ. ಮ್ಯಾಕ್ಸಿಮಮ್ ಮಾಸ್ ಆಗಿ ಸುದೀಪ್ ಅವರು ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಡಿ.25ರಂದು ಈ ಸಿನಿಮಾ ತೆರೆಕಾಣಲಿದೆ.
ಕಿಚ್ಚ ಸುದೀಪ್ ಅವರ ಮ್ಯಾಕ್ಸಿಮಮ್ ಮಾಸ್ ಅವತಾರವನ್ನು ನೋಡಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿದ್ದಾರೆ. ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಲಿದ್ದು, ಜನರ ನಿರೀಕ್ಷೆಯನ್ನು ಡಬಲ್ ಮಾಡಲು ಟ್ರೇಲರ್ ರಿಲೀಸ್ ಮಾಡಲಾಗಿದೆ. ಇಂದು (ಡಿ.22) ಚಿತ್ರದುರ್ಗದಲ್ಲಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗಿದೆ.
ಇದೇ ವೇದಿಕೆಯಲ್ಲಿ ಟ್ರೇಲರ್ ಅನಾವರಣ ಮಾಡಲಾಗಿದೆ. ಈ ಸಿನಿಮಾಗೆ ವಿಜಯ್ ಕಾರ್ತಿಕೇಯ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ನಲ್ಲಿ ಸುದೀಪ್ ಅವರ ಮಾಸ್ ಲುಕ್ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.ಇದು ಒಂದೇ ರಾತ್ರಿಯಲ್ಲಿ ನಡೆಯುವ ಆ್ಯಕ್ಷನ್ ಕಹಾನಿ. ಈ ಚಿತ್ರದಲ್ಲಿ ಸುದೀಪ್ ಅವರಿಗೆ ಹೀರೋಯಿನ್ ಇಲ್ಲ. ಪಕ್ಕಾ ಆ್ಯಕ್ಷನ್ ಬಯಸುವ ಪ್ರೇಕ್ಷಕರಿಗೆ ‘ಮ್ಯಾಕ್ಸ್’ ಸಿನಿಮಾದಲ್ಲಿ ಮನರಂಜನೆಯ ಫುಲ್ ಮೀಲ್ಸ್ ಇರಲಿದೆ ಎಂಬುದು ಟ್ರೇಲರ್ನಲ್ಲೇ ಕಾಣಿಸುತ್ತಿದೆ. ಇನ್ನು, ಖಡಕ್ ಆದಂತಹ ಡೈಲಾಗ್ಗಳ ಮೂಲಕವೂ ಸುದೀಪ್ ಅವರು ವಿಲನ್ಗಳಿಗೆ ನಡುಕು ಹುಟ್ಟಿಸಿದ್ದಾರೆ.