Breaking News

ಕ್ಯಾಂಟರ್​​ ಪಲ್ಟಿಯಾಗಿ ಟಿಟಿ ವಾಹನಕ್ಕೆ ಡಿಕ್ಕಿ

Spread the love

ಧಾರವಾಡ: ಕ್ಯಾಂಟರ್​​ ಪಲ್ಟಿಯಾಗಿ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಹೊರವಲಯದ ಬಳಿ ಭಾನುವಾರ ರಾತ್ರಿ ನಡೆದಿದೆ.

ಕ್ಯಾಂಟರ್​​ ವಾಹನದಲ್ಲಿದ್ದ ಹನುಮಂತಪ್ಪ ಮಲ್ಲದ, ಮಹಾಂತೇಶ ಚವ್ಹಾಣ, ಮಹದೇವ ಹುಳೊಳ್ಳಿ ಮೃತರು. ಸಾವನ್ನಪ್ಪಿದವರು ಬೆಳಗಾವಿ ಜಿಲ್ಲೆಯ ಶಿರಸಂಗಿ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಶಿರಸಂಗಿಯಿಂದ ಗೋವಾಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಕ್ಯಾಂಟರ್​​ ವಾಹನ ಶಿರಸಂಗಿಯಿಂದ ಗೋವಾಗೆ ತೆರಳುತ್ತಿತ್ತು, ಗೋವಾದಿಂದ ಹುಬ್ಬಳ್ಳಿಗೆ ಟಿಟಿ ವಾಹನ ಬರುತ್ತಿತ್ತು. ಕ್ಯಾಂಟರ್​​ ವಾಹನ ಕಡಬಗಟ್ಟಿ ಗ್ರಾಮದ ಹೊರವಲಯದ ಬಳಿ ಪಲ್ಟಿಯಾಗಿ ಟಿಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕ್ಯಾಂಟರ್​​​ ವಾಹನದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಓರ್ವನಿಗೆ ಗಾಯಗಳಾಗಿವೆ. ಟಿಟಿ ವಾಹನದಲ್ಲಿನ ಇಬ್ಬರು ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್​​ಗೆ ರವಾನಿಸಲಾಗಿದೆ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ