Breaking News

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್,ಸ್ಯಾನಿಟೈಸರ್ ವಿತರಣೆ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಸಿದ್ದರಾಗುತ್ತಿರುವ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಸೋಮವಾರ ಉಚಿತ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದರು.

ಯಮಕನಮರಡಿ ಸೇರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾಸ್ಕ್‌ ವಿತರಸಿದರು.

ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಇರುವಂತೆ ವಿದ್ಯಾರ್ಥಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಸತೀಶ ಅವರ ಪುತ್ರ ರಾಹುಲ್ ಜಾರಕಿಹೊಳಿ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸೇರಿದಂತೆ ಗ್ರಾಮದ ಮುಖಂಡರು ಇದ್ದರು.


Spread the love

About Laxminews 24x7

Check Also

ಕನಿಷ್ಠ ವೇತನಕ್ಕೆ ಒತ್ತಾಯಿಸಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮನವಿ

Spread the loveಬೆಳಗಾವಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಿಸಬೇಕಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ