Breaking News

ಬಂಟ್ವಾಳ: ಶಾಲಾ ಕೊಠಡಿಯಲ್ಲಿ ಕೂಡಿಹಾಕಿ ಯುವತಿಯ ಅತ್ಯಾಚಾರ –

Spread the love

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆಂದು ಬಂದಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಶಾಲಾ ಕೊಠಡಿಯಲ್ಲಿಯೇ ಕೂಡಿಹಾಕಿ ಬಲವಂತದಿಂದ ಅತ್ಯಾಚಾರ ‌ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಾವೂರ ನಿವಾಸಿ ಜಯಂತ ಬಂಧಿತ . ಡಿ.14ರಂದು ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವಿತ್ತು. ಅಂದು ಕಾರ್ಯಕ್ರಮ ನೋಡಲು ಮನೆಯವರೊಂದಿಗೆ ಯುವತಿ ಶಾಲೆಗೆ ಬಂದಿದ್ದಳು. ಈ ವೇಳೆ ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು.

ಪ್ರಕರಣ ದಾಖಲಿಸಿಕೊಂಡ ಬಂಟ್ವಾಳ ಗ್ರಾಮಾಂತರ ಎಸ್.ಐ. ಹರೀಶ್ ಹಾಗೂ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ