Breaking News

ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್

Spread the love

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಸಂವಿಧಾನ ರಕ್ಷಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕಲಬುರಗಿ ಬಂದ್‌ಗೆ ಇಂದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.kalaburagi-bandh

ಬೆಳಗ್ಗೆ 6 ಗಂಟೆಯಿಂದಲೇ ಬಂದ್ ಆರಂಭವಾಯಿತು. ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಅಂಗಡಿ-ಮುಂಗಟ್ಟುಗಳು ಬಂದ್​ ಆಗಿದ್ದವು. ಹೀಗಾಗಿ ವ್ಯಾಪಾರ-ವಹಿವಾಟು ಸ್ಥಗಿತಗೊಂಡಿದೆ. ಬಸ್, ಆಟೋ ಸಂಚಾರ ಕೂಡಾ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು. ವೃದ್ಧರು, ಮಹಿಳೆಯರು ನಡೆದುಕೊಂಡೇ ಸಾಗುತ್ತಿದ್ದುದು ಕಂಡುಬಂತು.

ಪ್ರಮುಖ ರಸ್ತೆಗಳು ಮಾತ್ರವಲ್ಲದೆ, ಬಡಾವಣೆಗಳ ರಸ್ತೆಗಳನ್ನೂ ಬಂದ್ ಮಾಡಿದ ಕಾರಣ ವಾಹನ ಸವಾರರಿಗೆ ಅಡಚಣೆಯಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲೆಡೆ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ.

ಡಿ.23ರ ಮಧ್ಯರಾತ್ರಿಯಿಂದ ಡಿ.24ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ