Breaking News

ಅಮೆರಿಕದಲ್ಲಿ ಶಿವರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ; ದೂರವಾಣಿ ಮೂಲಕ ಮಾತಾಡಿದ ಸಿಎಂ

Spread the love

ನಟ ಶಿವರಾಜ್​ಕುಮಾರ್​ ಅವರಿಗೆ ಅಮೆರಿಕದಲ್ಲಿ ಇಂದು (ಡಿಸೆಂಬರ್​ 24) ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅನೇಕರು ಹಾರೈಸಿದ್ದಾರೆ.

ಅವರ ಆರೋಗ್ಯಕ್ಕಾಗಿ ಹಲವು ಕಡೆಗಳಲ್ಲಿ ಹೋಮ, ಪೂಜೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಶಿವರಾಜ್​ಕುಮಾರ್​ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಬಗ್ಗೆ ಅವರು ‘ಎಕ್ಸ್’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್​ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.

ನನಗೆ ತಿಳಿದಂತೆ ಶಿವರಾಜ್​ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ