ಹುಬ್ಬಳ್ಳಿ: ನಗರದ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಿಂದ ರಾಮೇಶ್ವರಂ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ರೈಲು ಸಂಖ್ಯೆ 07355: ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಮಧ್ಯದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 4 ರಿಂದ ಜೂನ್ 28, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 28, 2024ರ ವರೆಗೆ ಈ ರೈಲು ಓಡಿಸಲು ಸೂಚಿಸಲಾಗಿತ್ತು. ಇದೀಗ ಇದನ್ನು ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 07356: ರಾಮೇಶ್ವರಂನಿಂದ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 5 ರಿಂದ ಜೂನ್ 29, 2025ರ ವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 29, 2024ರ ವರೆಗೆ ಓಡಿಸಲು ಸೂಚಿಸಲಾಗಿತ್ತು.
ಮಧುರೈ ವಿಭಾಗದ ವ್ಯಾಪ್ತಿಯಲ್ಲಿ ಬರುವ ಶಿವಗಂಗಾ ನಿಲ್ದಾಣದಲ್ಲಿ ಈ ರೈಲುಗಳಿಗೆ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗಿದೆ.
Laxmi News 24×7