ಶಿವಮೊಗ್ಗ, (: ಮೊಬೈಲ್ (Mobile) ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿದ್ದ ಧನುಶ್ರೀ(20) ಚಿಕಿತ್ಸೆ ಫಲಲಿಸದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತಿದ್ದ ಧನುಶ್ರೀಗೆ ಹೆಚ್ಚು ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿ ಮಾತಿಗೆ ಬೈದಿದ್ದಾರೆ. ಇಷ್ಟಕ್ಕೆ ನೊಂದ ಧನುಶ್ರೀ ಮೂರು ದಿನದ ಹಿಂದೆ ವಿಷ ಸೇವಿಸಿದ್ದಾಳೆ. ಕೂಡಲೇ ಧನುಶ್ರೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಇದೀಗ ಚಿಕಿತ್ಸೆ ಫಲಕಾರಿಯಾಗಿಲ್ಲ.
ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದರು. ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಗುರುವಾರ) ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
Laxmi News 24×7