Breaking News

ಹಾವೇರಿ: ಅನೈತಿಕ ಸಂಬಂಧ ಆರೋಪ: ವಿದ್ಯುತ್​ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ- ವ್ಯಕ್ತಿ ಸಾವು

Spread the love

ಹಾವೇರಿ: ಅನೈತಿಕ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಲವರು ಲೈಟ್ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಪ್ರಕರಣ ಜಿಲ್ಲೆಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತನನ್ನು ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ.

ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಅಲ್ಲದೇ, ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ.

ಎಫ್​ಐಆರ್​ ವಿವರ: ”ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಂದ ಆರೋಪಿತರು ತಮ್ಮ ಮನೆಯ ಹೆಣ್ಣು ಮಕ್ಕಳೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅವಾಚ್ಯವಾಗಿ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ನನ್ನ ಸಹೋದರ ಪ್ರಕಾಶ್​, ಈ ರೀತಿ ಆರೋಪ ಮಾಡುವುದು ಸರಿಯಲ್ಲ, ನನಗೆ ಅವಳೊಂದಿಗೆ ಅನೈತಿಕ ಸಂಬಂಧ ಇಲ್ಲ ಎಂದಿದ್ದಾನೆ. ಆದರೆ ಕೋಪಗೊಂಡ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿ, ವಿದ್ಯುತ್​ ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಪ್ರಕಾಶನನ್ನು ಹಾನಗಲ್ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ” ಎಂದು ಮೃತನ ಸಹೋದರ ಫಕ್ಕೀರೇಶ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Spread the loveಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ