Breaking News

ರೈಲಿನಲ್ಲಿ 1 ಕೋಟಿ ರೂ. ಮೌಲ್ಯದ ಗಾಂಜಾ ಸರಬರಾಜು: ಆರೋಪಿಗಳು ಅರೆಸ್ಟ್​

Spread the love

ಬೆಂಗಳೂರು,: ರೈಲಿನಲ್ಲಿ (Train) ಕೆಜಿಗಟ್ಟಲೇ ಗಾಂಜಾ (Ganja) ಸರಬರಾಜು ಮಾಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರೆ. ಆರೋಪಿಗಳ ಬಳಿ ಇದ್ದ, ಬರೊಬ್ಬರಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅಲರ್ಟ್​ ಆಗಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಚೆಕ್​​ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.ಹೀಗಾಗಿ, ಪೆಡ್ಲರ್​ಗಳು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಪೊಲೀಸ್ ಶ್ವಾನಕ್ಕೂ ವಾಸನೆ ಬಾರದ ರೀತಿ ರೈಲಿನಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದಾರೆ.

ಪ್ರಶಾಂತಿ ಮತ್ತು ಹಟಿಯಾ ಎಕ್ಸ್​​​ಪ್ರೆಸ್ ರೈಲಿನಲ್ಲಿ ಆಂದ್ರಪ್ರದೇಶ, ತಮಿಳುನಾಡು, ಓಡಿಶಾಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪೆಡದ ಬೆಂಗಳೂರು ರೈಲ್ವೆ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಇದ್ದ ಟ್ರ್ಯಾಲಿ ಬ್ಯಾಗ್​ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಕೂಡಲೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ಗಾಂಜಾವನ್ನು ಸೀಜ್​ ಮಾಡಿದ್ದಾರೆ.


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ