ಹೊಟ್ಟೆನೋವೆಂದು ಆಸ್ಪತ್ರೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Spread the love

ಹಾವೇರಿ, ಡಿಸೆಂಬರ್​ 27: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ (death) ಘಟನೆ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಮಿನಾ ಬಾನು ಅರಳಿಕಟ್ಟಿ(23) ಮೃತ ಮಹಿಳೆ. ಮೆಡಿಸಿನ್ ಓವರ್​ಡೋಸ್​ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳಾ ಪೋಷಕರಿಂದ ಪ್ರತಿಭಟನೆ ಮಾಡಲಾಗಿದೆ.

ಬ್ಯಾಡಗಿಯ 23 ವರ್ಷದ ಮಹಿಳೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಹಾವೇರಿಯ ವೀರಾಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಆಸ್ಪತ್ರೆ ವೈದ್ಯರು ಅತಿಯಾದ ಔಷಧಿ ನೀಡಿದ್ದರಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದು, ಆಸ್ಪತ್ರೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

 


Spread the love

About Laxminews 24x7

Check Also

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ

Spread the loveಬೆಂಗಳೂರು: ರಾಜ್ಯದ ಹಲವೆಡೆ ಇಂದೂ ಕೂಡ ಆಲಿಕಲ್ಲು ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಸುರಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ