Breaking News

14 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಾಗಾಟ ಮಾಡುತ್ತಿದ್ದ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ: ಅಕ್ರಮವಾಗಿ ಸುಮಾರು 14 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಾಗಾಟ ಮಾಡುತ್ತಿದ್ದ ಮೂವರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಕೆರಲೆ ಗ್ರಾಮದ ಸುಹಾಸ್ ಗಾಯಕವಾಡ್, ಮಗ ಸಂದೀಪ್ ಸುಹಾಸ್ ಗಾಯಕವಾಡ ಹಾಗೂ ಹಿಂಡಲಗಾ ಗೋಕುಲ ನಗರದ ಮಾರುತಿ ಮುರುಗೇಶ್ ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಕ್ರೂಸರ್ ವಾಹನದಲ್ಲಿ ಮಹರಾಷ್ಟ್ರದಿಂದ ಬೆಳಗಾವಿಗೆ ಬೆಳ್ಳಿ ಸಾಗಿಸುತ್ತಿದ್ದರು, ಹತ್ತರಗಿ ಟೋಲ್ ಬಳಿ  ಪೊಲೀಸರು ವಾಹನ ತಪಾಸಣೆ ವೇಳೆ ಅಕ್ರಮವಾಗಿ ಬೆಳ್ಳಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಮೂವರನ್ನು ಬಂಧಿಸಿದ ಪೊಲೀಸರು  ಬಂಧಿತರಿಂದ 14,39,670 ಮೌಲ್ಯದ 47.989 ಕೆಜಿ ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಕ್ರೂಸರ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. 

ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ