Breaking News

ಕಟಾವು ಮಾಡಲಿದ್ದ ಬೆಳೆಯನ್ನು ಕಾಡಾನೆಗಳು ನಾಶಪಡಿಸಿರುವುದರಿಂದಾಗಿ ಹಲವು ರೈತರಿಗೆ ಲಕ್ಷಾಂತರ ರೂ. ನಷ್ಟ

Spread the love

ಹಾಸನ (ಬೇಲೂರು): ಕಟಾವಿಗೆ ಬಂದಿರುವ ಭತ್ತದ ಬೆಳೆಗಳನ್ನ ಕಾಡಾನೆಗಳ ಹಿಂಡು ತುಳಿದು ನಾಶಪಡಿಸಿರುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮಲಸಾವರ ಹಾಗೂ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ರಾತ್ರಿ ನಡೆದಿದೆ.

22 ಕಾಡಾನೆಗಳು ಚಿಕ್ಕ ಸಾಲಾವರ (ಬಾವಿಕಟ್ಟೆ) ಗ್ರಾಮದ ಹರೀಶ್, ಶಾಂತಪ್ಪ, ಅಶೋಕ, ಉಪೇಂದ್ರ ಅವರಿಗೆ ಸೇರಿದ ಭತ್ತದ ಪೈರನ್ನು ನಾಶಪಡಿಸಿ ಮಂಜುನಾಥ್ ಎಂಬುವರಿಗೆ ಸೇರಿದ ತೆಂಗಿನ ಮರಗಳನ್ನು ಮುರಿದಿವೆ. ಬಾವಿಕಟ್ಟೆ ಗ್ರಾಮದ ಸುಶೀಲಮ್ಮ ಎಂಬ ರೈತ ಮಹಿಳೆ ಕಟಾವು ಮಾಡಿ ಒಕ್ಕುವ ಸಲುವಾಗಿ ರಾಶಿ ಹಾಕಿದ್ದ ಭತ್ತವನ್ನು ತುಳಿದು ಹಾಳುಮಾಡಿವೆ.ಅನುಘಟ್ಟ ಗ್ರಾಮದ ಎ. ಎನ್ ನಾಗರಾಜು ಎಂಬುವರಿಗೆ ಸೇರಿದ 1 ಎಕರೆಯಲ್ಲಿ ಸಮೃದ್ಧವಾಗಿ ಬೆಳೆದಿದ್ದ ಬೆಳೆ ಭುವನೇಶ್ವರಿ ಗುಂಪಿನ ಕಾಡಾನೆಗಳ ಸಂಚಾರದಿಂದ ಧ್ವಂಸವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕಟಾವು ಮಾಡಲಿದ್ದ ಬೆಳೆಯನ್ನು ಕಾಡಾನೆಗಳು ನಾಶಪಡಿಸಿರುವುದರಿಂದಾಗಿ ಹಲವು ರೈತರಿಗೆ ಲಕ್ಷಾಂತರ ರೂ. ನಷ್ಟವಾಗಿದೆ.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ