Breaking News

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ: ಆರ್.ಅಶೋಕ

Spread the love

ಬೆಂಗಳೂರು: “ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?. ಪ್ರಿಯಾಂಕ್ ಖರ್ಗೆ ಕಲಬುರಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ” ಎಂದು ಒತ್ತಾಯಿಸಿದ್ದಾರೆ.

“ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಅಂದು ಸಚಿವರಾಗಿದ್ದ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್​ನೋಟ್​ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ” ಎಂದು ಹೇಳಿದ್ದಾರೆ.

“ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ‌ ಕೊಡುವಂತೆ ಬೀದರ್​ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ” ಎಂದು ದೂರಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ