Breaking News

ರಾಜ್ಯದಲ್ಲಿ ಅರಾಜಕಥೆ ಸೃಷ್ಟಿಯಾಗಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು.

Spread the love

ದಾವಣಗೆರೆ: ಗುತ್ತಿಗೆದಾರ ಸಚಿನ್​ ಆತ್ಮಹತ್ಯೆ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೊನ್ನೆ ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಪಿಎ ಕಿರುಕುಳದಿಂದ ಎಸ್​ಡಿಎ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ ಸಾಯುವ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ ಹೆಸರು ಬರೆದಿಟ್ಟಿದ್ದ. ಆದರೂ ಅವರ ಪಿಎ ಬಂಧನ ಆಗದೆ ಬೇಲ್ ಪಡೆದು ಆಚೆ ಓಡಾಡುತ್ತಿದ್ದಾರೆ. ಈಗ ಕಲಬುರಗಿಯಲ್ಲಿ ಪ್ರಿಯಾಂಕ್​ ಖರ್ಗೆ ಪಿಎ ಒತ್ತಡದಿಂದ ಗುತ್ತೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯಾಂಕ್ ಖರ್ಗೆ ಪಿಎ ಸೇರಿ ಅನೇಕ ಶಾಸಕರ ಒತ್ತಡ ಇದೆ ಅಂತ ಡೆತ್​ನೋಟ್ ಬರೆದಿಟ್ಟರೂ ಎಫ್​ಐಆರ್ ಮಾಡಿಲ್ಲ” ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ