Breaking News

ಜ.15ರಂದು ಸಿಎಂ ಜೊತೆ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ: ಮುಷ್ಕರ ಕೈಬಿಟ್ಟ ಸಾರಿಗೆ ನೌಕರರ ಒಕ್ಕೂಟ

Spread the love

ಬೆಂಗಳೂರು: ಜನವರಿ 15ರಂದು ಸಿಎಂ ಸಿದ್ದರಾಮಯ್ಯ ರಸ್ತೆ ಸಾರಿಗೆ ನೌಕರರ ಜೊತೆ ಸಭೆ ನಡೆಸುವ ಭರವಸೆ ನೀಡಿದ್ದು, ಡಿ.31ರಿಂದ ಮಾಡಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯಲು ಕೆಎಸ್​ಆರ್​ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದ ಬೆನ್ನಲ್ಲೇ ಕ್ರಿಯಾ ಸಮಿತಿ ಮುಷ್ಕರದಿಂದ ಹಿಂದೆ ಸರಿಯಲು ತೀರ್ಮಾನಿಸಿದೆ. ಸಭೆಯಲ್ಲಿ ಮಕರ ಸಂಕ್ರಾಂತಿಯಂದು ಸಭೆ ನಡೆಸಿ ರಸ್ತೆ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಭರವಸೆ ನೀಡಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಕೆಎಸ್ಆರ್​ಟಿಸಿ ಸಿಬ್ಬಂದಿ ಮತ್ತು ನೌಕರರ ಒಕ್ಕೂಟದ ಅಧ್ಯಕ್ಷ ಅನಂತ ಸುಬ್ಬಾರಾವ್​ “ಮುಷ್ಕರ ವಾಪಾಸ್​ ಪಡೆಯಲು ತೀರ್ಮಾನಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜ.15 ರಂದು ಸಾರಿಗೆ ನೌಕರರ ಒಕ್ಕೂಟದ ಜೊತೆ ಸಭೆ ನಡೆಸುವ ಭರವಸೆ ನೀಡಿದ್ದಾರೆ. ಆ ಸಭೆಯಲ್ಲಿ ಎಲ್ಲ ಬೇಡಿಕೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಾಗುವುದು. ಹೀಗಾಗಿ ಮುಷ್ಕರ ಕೈಬಿಡುವಂತೆ ಸಚಿವ ರಾಮಲಿಂಗಾ ರೆಡ್ಡಿ ಮನವಿ ಮಾಡಿದ್ದಾರೆ. ಹಾಗಾಗಿ ಡಿ.31 ರಿಂದ ಮಾಡಲು ಉದ್ದೇಶಿಸಿದ್ದ ಮುಷ್ಕರವನ್ನು ಸದ್ಯ ಕೈ ಬಿಡಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದರು.

ಬಾಕಿ ವೇತನ ಪಾವತಿ ಹಾಗೂ ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳನ್ನು ನೌಕರರ ಕ್ರಿಯಾ ಸಮಿತಿ ಮುಂದಿಟ್ಟಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ