Breaking News

ಅಂಬೇಡ್ಕರ್ ಕುರಿತು ಅಮಿತ್​​​ ಶಾ ಹೇಳಿಕೆ ಖಂಡಿಸಿ ಬಳ್ಳಾರಿಯ ಕಂಪ್ಲಿ ಸಂಪೂರ್ಣ ಬಂದ್​!

Spread the love

ಬಳ್ಳಾರಿ: ಡಾ. ಬಿ.ಆರ್​​​. ಅಂಬೇಡ್ಕರ್​​​​ ಅವರ ಕುರಿತಾದ ಕೇಂದ್ರ ಗೃಹ ಸಚಿವ ಅಮಿತ್​​​ ಶಾ ಹೇಳಿಕೆ ಖಂಡಿಸಿ ಇಂದು ಜಿಲ್ಲೆಯ ಕಂಪ್ಲಿ ತಾಲೂಕು ಸಂಪೂರ್ಣ ಬಂದ್​ ಆಗಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್​​​ ಅವರ ಬಗ್ಗೆ ಬಿಜೆಪಿಗರು ಅವಮಾನ ಮಾಡುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳ ಪ್ರತಿಭಟನಕಾರರು ಬೆಳಗ್ಗೆ 6 ಗಂಟೆಯಿಂದಲೇ ಬಂದ್​ ಆರಂಭಿಸಿದ್ದಾರೆ. ಬಂದ್​ ಇದ್ದರೂ ಕಂಪ್ಲಿಯಲ್ಲಿ ಎಂದಿನಂತೆ ದಿನಸಿ ಮಾರುಕಟ್ಟೆಗಳು, ಮತ್ತು ಆಟೋ, ಕ್ಯಾಬ್​ ಮಾತ್ರ ಓಪನ್ ಇತ್ತು. ಇವುಗಳನ್ನು 10 ಗಂಟೆ ಬಳಿಕ ಬಂದ್​ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಶಾಲೆ ಕಾಲೇಜುಗಳಿಗೆ ಯಾವ ಸಮಸ್ಯೆ ನೀಡದೇ ಅವುಗಳು ಎಂದಿನಂತೆ ನಡೆಯಲು ಅವಕಾಶ ಮಾಡಿದ್ದಾರೆ. ಬಂದ್​​​ ಹಿನ್ನೆಲೆ ಕಂಪ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ನಗರದಾದ್ಯಂತ ಹಲವು ಕಡೆ ಅಲ್ಲಲ್ಲಿ ಪೊಲೀಸ್ ತುಕಡಿ ನಿಯೋಜನೆಗೊಂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ