Breaking News

ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ… ಕರವೇ ಬೇಡಿಕೆಗೆ ತಕ್ಷಣ ಸ್ಪಂದಿಸಿದ ಸಚಿವ ಸತೀಶ ಜಾರಕಿಹೊಳಿ

Spread the love

ಉಳವಿ ರಸ್ತೆ ಅಭಿವೃದ್ಧಿಗೆ ತಕ್ಷಣ ಟೆಂಡರ್ ಕರೆಯಿರಿ…
ಕರ್ನಾಟಕ ರಕ್ಷಣಾ ವೇದಿಕೆಯಿಂದ ಆಗ್ರಹ
ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ
ಸಚಿವರಿಂದ ತಕ್ಷಣ ಸಿಕ್ಕ ಸ್ಪಂದನೆ

ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತರು ದರ್ಶನ ಪಡೆಯಲು ಹೋಗುತ್ತಾರೆ. ಆದ್ದರಿಂದ ಉಳವಿಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಸಲ್ಲಿಸಿದ ಮನವಿಗೆ ಸ್ಥಳದಲ್ಲೇ ಸ್ಪಂದಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ, ಉಳವಿ ರಸ್ತೆ ದುರಸ್ತಿಗೆ ತಕ್ಷಣವೇ ಕ್ರಮಕೈಗೊಂಡು, ಶೀಘ್ರವೇ ರಸ್ತೆ ದುರಸ್ತಿಗೆ ಟೆಂಡ‌ರ್ ಕರೆಯುವಂತೆ ಆದೇಶಿಸಿದರು.
ವಿಪರೀತ ಮಳೆಯಿಂದಾಗಿ ಪೂಟೊಳ್ಳಿ ಕ್ರಾಸ್ ನಿಂದ ಗುಂದ ಮಾರ್ಗವಾಗಿ ಉಳವಿಗೆ ಹೋಗುವ ರಸ್ತೆ ಹಾಳಾಗಿದ್ದು, ಇದರಿಂದ ಭಕ್ತರು ತೊಂದರೆ ಅನುಭವಿಸುತ್ತಿರುವುದನ್ನು ಸಚಿವರಿಗೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮನವರಿಕೆ ಮಾಡಿದರು. ಈ ಸಂದರ್ಭದಲ್ಲಿ ರವಿ ಜಿಂದ್ರಾಳೆ, ರಾಜು ಕುಡಸೋಮಣ್ಣವರ, ಶಿವಾನಂದ ತಂಬಾಕಿ, ರಾಜು ಸೊಗಲದ, ಜಗದೀಶ್ ಮಾಳಗಿ, ಬಸವರಾಜ್ ಬೋಳಗೌಡರ, ರಮೇಶ್ ಯರಗಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ