ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರ ರೀತ್ಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿಸಲಾಯಿತು.
ಪೊಲೀಸ್ ಆಯುಕ್ತರು ಬೆಳಗಾವಿ ನಗರ, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಸಮಿತಿ ಸದಸ್ಯರಿಂದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಬಗ್ಗೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.