Breaking News

ಪತಿ ಹಾಗೂ ಅವರ ಮನೆಯವರ ಕಿರುಕುಳಕ್ಕೆ ಬೆಸತ್ತು ಗೃಹಿಣಿ ಆತ್ಮಹತ್ಯೆ.

Spread the love

ಬೆಳಗಾವಿ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮತ್ತು ಅವರ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ಮೃತ ಮಹಿಳೆ. ಶನಿವಾರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2018ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿ ಜೊತೆಗೆ ರಾಕಸಕೊಪ್ಪ ಗ್ರಾಮದ ಸವಿತಾ ಅವರ ವಿವಾಹವಾಗಿತ್ತು. ದಂಪತಿಗೆ 4 ವರ್ಷದ ಗಂಡು ಮಗುವಿದೆ. ಮಾರುತಿ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ನಮ್ಮ ಮಗಳ ಸಾವಿಗೆ ಅಳಿಯ ಮತ್ತು ಅವರ ಮನೆಯವರ ಕಿರುಕುಳವೇ ಕಾರಣ ಎಂದು ಮೃತ ಸವಿತಾ ಅವರು ತವರು ಮನೆಯವರು ದೂರಿದ್ದಾರೆ.

ಸವಿತಾಗೆ ನಿರಂತರ ಕಿರುಕುಳ ನೀಡುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಪತಿ‌ ಮಾರುತಿ ಪದೇ ಪದೆ ಸವಿತಾ ಮೇಲೆ ಹಲ್ಲೆ ಮಾಡುತ್ತಿದ್ದ. ಸವಿತಾ ನೇಣು ಹಾಕಿಕೊಂಡಿಲ್ಲ, ಗಂಡನೇ ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ

Spread the loveಹಲಕರ್ಣಿ ಗ್ರಾಮದಲ್ಲಿ ಪಿಡಿಒ ವಿರುದ್ಧ ಆಕ್ರೋಶ ಮೂಲಭೂತ ಸೌಲಭ್ಯಗಳಿಗೆ ಸ್ಪಂದಿಸಿದ ಅಧಿಕಾರಿಯ ವರ್ಗಾವಣೆ!!! ಖಾನಾಪೂರ ತಾಲೂಕಿನ ಹಲಕರ್ಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ