Breaking News

ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ; ಸಿ.ಟಿ. ರವಿ ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿ ಎದುರಿಸಿದ್ದಾರೆ

Spread the love

ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ; ಸಿ.ಟಿ. ರವಿ
ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿ ಎದುರಿಸಿದ್ದಾರೆ
ರಾಜ್ಯದಲ್ಲಿನ ಅಘೋಷಿತ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧ
ಜನರು ಮತ್ತು ಕಾರ್ಯಕರ್ತರು ನಮ್ಮ ಜೊತೆಗಿದ್ದಾರೆ
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ

ನಡೆದ ದೌರ್ಜನ್ಯವನ್ನು ರಾಜ್ಯಪಾಲರಿಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನಮ್ಮ ಹಿರಿಯರು ಇದಕ್ಕಿಂತ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಈಗೀರುವ ಅಘೋಷಿತ ತುರ್ತು ಪರಿಸ್ಥಿತಿಯನ್ನು ಕೂಡ ನಾವು ಎದುರಿಸುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ತಮ್ಮ ಮೇಲೆ ನಡೆದ ದೌರ್ಜನ್ಯವನ್ನು ಉಲ್ಲೇಖಿಸಿದ್ದು, ಉಳಿದಿದ್ದು, ಸರ್ಕಾರಕ್ಕೆ ಬಿಟ್ಟಿದ್ದು, ಜನರು ಮತ್ತು ಕಾರ್ಯಕರ್ತರು ನಮ್ಮ ಜೊತೆಗಿದ್ದಾರೆ. ಇದಕ್ಕಿಂತ ಕಠಿಣ ಪರಿಸ್ಥಿತಿಯನ್ನು ನಮ್ಮ ಹಿರಿಯರು ಎದುರಿಸಿದ್ದು, ಇದೊಂದು ಅಘೋಷಿತ ತುರ್ತು ಪರಿಸ್ಥಿತಿ.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಬದಲಾಗಿದೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಮುಖಂಡರಿಗೆ ಒಂದು ಕಾನೂನು ಮತ್ತು ಕಾಂಗ್ರೆಸ್ಸೇತರ ಪಕ್ಷಗಳ ಮುಖಂಡರಿಗೆ ಮತ್ತೊಂದು ಕಾನೂನು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ವಿರುದ್ಧ ನೀಡುವ ದೂರು ಕೂಡಲೇ ಸ್ವೀಕೃತವಾಗುತ್ತದೆ ಮತ್ತು ಮತ್ತು ಎಫ್ಐಆರ್ ಸಹ ದಾಖಲಾಗುತ್ತದೆ, ಆದರೆ ತಾನು ಪೋಲೀಸ್ ಸ್ಟೇಷನ್ ನಲ್ಲಿ ತನ್ನ ಮೇಲೆ ನಡೆದ ಹತ್ಯೆ ಯತ್ನ ಮತ್ತು ಪೊಲೀಸ್ ದೌರ್ಜನ್ಯದ ಬಗ್ಗೆ ಡಿಸೆಂಬರ್ 19ರಂದು ದೂರು ನೀಡಿದ್ದರೂ, ಸಿಒಡಿ ಅಧಿಕಾರಿ ಮತ್ತು ಡಿಜಿಪಿ-ಐಜಿ ಇಬ್ಬರೂ ತಮ್ಮ ಗಮನಕ್ಕೆ ಬಂದಿಲ್ಲವೆನ್ನುತ್ತಾರೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ