Breaking News

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ

Spread the love

ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಅಯೋಧ್ಯೆ ನಗರದ ವಾಟರ್​ಟ್ಯಾಂಕ್ ಬಳಿ ನಡೆದಿದೆ. ಅಂಬೇಡ್ಕರ್ ಕಾಲೋನಿ ನಿವಾಸಿ ಮಾರುತಿ ಚಾಕು ಇರಿತಕ್ಕೊಳಗಾದ ಯುವಕ. ಬುಧವಾರ ಸಂಜೆ ವಾಟರ್​ಟ್ಯಾಂಕ್ ಬಳಿ ನಿಂತಾಗ ಮೂರ್ನಾಲ್ಕು ಯುವಕರು ಬಂದು ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು ಇರಿಯುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಾರುತಿಯ ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕು ಇರಿಯಲಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಕಾನೂನು ಸುವ್ಯವಸ್ಥೆ ಡಿಸಿಪಿ ನಂದಗಾವಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಹಾಗೂ ಸಂಬಂಧಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೊಲೆ ಯತ್ನದ ಪ್ರಕರಣವನ್ನು ದಾಖಲು ಮಾಡಿಕೊಂಡು ಚಾಕು ಇರಿದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ.

ಗುಂಪಿನಿಂದ ಮೂವರ ಮೇಲೆ ಹಲ್ಲೆ: ಮತ್ತೊಂದೆಡೆ, ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪೊಂದು ಮೂರು ಜನರ ಮೇಲೆ ಹಲ್ಲೆ ಮಾಡಿರುವ ಘಟನೆ ಬಿಡನಾಳದ ಕೆಎಲ್ಇ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಂತೋಷ (54), ಬಚ್ಚು (40), ಬಿಕ್ರಮ (34) ಎಂದು ಗುರುತಿಸಲಾಗಿದೆ.

ನೀರಿನ ವಿಚಾರಕ್ಕೆ ಹತ್ತಾರು ಜನರ ಗುಂಪು ಏಕಾಏಕಿ ದಾಳಿ ಮಾಡಿ ಮಾಡಿದೆ. ಈ ವೇಳೆ, ಕಟ್ಟಿಗೆಯಿಂದ ಹಲ್ಲೆ ಮಾಡಿದ ಪರಿಣಾಮ ಸಂತೋಷ, ಬಚ್ಚು ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ವಿಷಯ ತಿಳಿದು ಕಿಮ್ಸ್ ಆಸ್ಪತ್ರೆಗೆ ಕಸಬಾಪೇಟೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ