Breaking News

ಸರ್ಕಾರದ ಅನುಮತಿ ಸಿಕ್ಕ ನಂತರ 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಪರೀ

Spread the love

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ನಿಗಮಗಳು ಸೇರಿದಂತೆ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ ಕೋರಿಕೆ ಸಲ್ಲಿಕೆಯಾಗಿದೆ. ಸರ್ಕಾರದ ಅಂತಿಮ ಒಪ್ಪಿಗೆ ದೊರೆತ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ.

ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ವಾಯುವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಸಂಸ್ಥೆಗಳು ನೇಮಕಾತಿ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಕೋರಿಕೆ ಸಲ್ಲಿಸಿದ್ದವು. ಆ ಪ್ರಕಾರ ಸಂಕ್ಷಿಪ್ತ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಸಂಸ್ಥೆಗಳು ವಿವಿಧ ಕಾರಣಗಳನ್ನು ನೀಡಿ ವಿವರವಾದ ಅಧಿಸೂಚನೆಗೆ ಸಮಯ ಕೋರಿರುವ ಕಾರಣ ತಕ್ಷಣಕ್ಕೆ ಅರ್ಜಿ ಆಹ್ವಾನಿಸಲು ಸಾಧ್ಯವಾಗುತ್ತಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಒಳಮೀಸಲಾತಿ ವಿಚಾರ ತೀರ್ಮಾನ ಆಗುವವರೆಗೂ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಸರ್ಕಾರ ಅನುಮತಿ ಕೊಟ್ಟ ನಂತರ ಆದಷ್ಟು ಬೇಗ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ನಿಗದಿತ ಪಠ್ಯಕ್ರಮದ ಪ್ರಕಾರ, ಅಭ್ಯರ್ಥಿಗಳು ಪರೀಕ್ಷೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಅವರು ಸಲಹೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ