Breaking News

ಕಾಮಗಾರಿ ನಡೆಯುತ್ತಿದ್ದ ಜಾಗದ ಮೋರಿಯೇ ಇತನ ಬಾಳಿಗೆ ಕಂಟಕ

Spread the love

ಬೆಂಗಳೂರು, (ಜನವರಿ 03): ಬೆಂಗಳೂರಿನ ಹೆಸರಘಟ್ಟ ರಸ್ತೆಯ ಲಕ್ಷ್ಮಿಪುರದ ನಿವಾಸಿ ಹರೀಶ್ ನಿನ್ನೆ ರಾತ್ರಿ 9.5ರ ಸುಮಾರು ತನ್ನ ಚಿಕ್ಕಮ್ಮನ ಮನೆಗೆ ತೆರಳಬೇಕಿತ್ತು. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ‌ ಹರೀಶ್, ರಾತ್ರಿ ಊಟ ತೆಗೆದುಕೊಂಡು ತನ್ನ ಮನೆಗೆ ಹೊರಟಿದ್ದ. ಈ ವೇಳೆ ರಸ್ತೆಯ ಪಕ್ಕದಲ್ಲಿನ ತಡೆಗೋಡೆ ಇಲ್ಲದ ಜಾಗಕ್ಕೆ ಹೋಗಿ ಮೂರ್ತ ವಿಸರ್ಜನೆಗೆ ಹೋಗಿದ್ದಾನೆ ಅಷ್ಟೇ ಆಯತಪ್ಪಿ ಚರಂಡಿಯಲ್ಲಿ ಬಿದ್ದಿದ್ದಾನೆ.

ಕಳೆದ ಆರು ತಿಂಗಳ ಹಿಂದೆ ಹರೀಶ್ ಮನೆ ಬಿಟ್ಟು ಗಾರೆ ಕೆಲಸ ಮಾಡುತ್ತಿದ್ದ. ಕುಡಿತದ ಚಟ ಬಿಡಿಸಲು ರಿಯಾಬ್ ಸೆಂಟರ್ ಗೆ ಸೇರಿಸಲಾಗಿತ್ತು, ಅಲ್ಲಿಂದ ಬಂದು ಸ್ವಲ್ಪ ದಿನ ಮನೆಯಲ್ಲಿದ್ದ. ಬಳಿಕ ವಾರದ ಹಿಂದೆ ಗಾರೆ ಮೇಸ್ತ್ರಿ ಕೆಲಸಕ್ಕೆ ಸೇರಿದ್ದ, ಹರೀಶ್ ಮೃತಪಡುವುದಕ್ಕೂ ಮೊದಲು ತೇಲಾಡಿಕೊಂಡು‌ ಹೋಗುತ್ತಿದ್ದ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ..ಆ ದೃಶ್ಯದಲ್ಲಿ ಕಾಣುವ ಹಾಗೆ ಓರ್ವ ವ್ಯಕ್ತಿ ಈತ ಬೀಳುವುದನ್ನ ಕಂಡರೂ ಕಾಣದಂತೆ ಹೋಗಿದ್ದು ಶೋಚನೀಯ.

ಸದ್ಯಕ್ಕೆ ಮೃತ ಹರೀಶ್ ನ ಮೃತದೇಹವನ್ನ MS ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದ್ದು, ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸರು‌ ಕೇಸ್ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ