ಸಿಎಂ ಜೊತೆ ಊಟ ಇದೇ ಮೊದಲೇನಲ್ಲ ಎಂದ ಸತೀಶ್ ಜಾರಕಿಹೊಳಿ: ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ನಾವು ಸೇರಿದ್ದೇವೆ ಎಂದು ಹೇಳಿದ್ದರು.
ಕುವೆಂಪು ನಗರದ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ನಾವು ಅವರ ಮನೆಗೆ ಹೋಗುತ್ತೇವೆ. ಅವರು ನಮ್ಮ ಮನೆಗೆ ಬರುತ್ತಾರೆ. ಸಿಎಂ ಜೊತೆಗೆ ಸಚಿವರು ಮಾತನಾಡಬೇಕು ಎಂದರು. ಹಾಗಾಗಿ, ಎಲ್ಲರೂ ಸೇರಿ ಹೊಸ ವರ್ಷದ ಸಂದರ್ಭದಲ್ಲಿ ಸೇರಿದ್ದೇವೆ. ರಾಜಕೀಯ, ಸಂಘಟನೆ ಬಗ್ಗೆ ಚರ್ಚೆ ಆಗಿವೆ. ನಮಗೆ ಯಾವುದೇ ಒಪ್ಪಂದದ ಬಗ್ಗೆ ಗೊತ್ತಿಲ್ಲ. 2028ರಲ್ಲಿ ಸರ್ಕಾರ ತರುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಇನ್ನು ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ, ಬದಲಾವಣೆ ಮಾಡುವ ವ್ಯಾಪ್ತಿಯೂ ನಮ್ಮ ಬಳಿ ಬರಲ್ಲ. ಈ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದರು.
”ಒಬ್ಬರಿಗೆ ಒಂದೇ ಹುದ್ದೆ ಎನ್ನುವುದು ಇದೆ. ಒಬ್ಬರಿಗೆ ಎರಡು ಹುದ್ದೆ ಕೊಟ್ಟ ಉದಾಹರಣೆಗಳೂ ಇವೆ. ಸಾಮರ್ಥ್ಯ, ಅನಿವಾರ್ಯತೆ ಇದ್ದಾಗ ಕೊಟ್ಟ ಉದಾಹರಣೆಗೆ ಇದೆ. ಪಕ್ಷದ ನಿರ್ಧಾರವನ್ನು ನಾವು ಪ್ರಶ್ನೆ ಮಾಡಲು ಆಗಲ್ಲ. ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಊಟದ ವೇಳೆ ಚರ್ಚೆಯೇ ಆಗಿಲ್ಲ. ಸದ್ಯ ಡಿ.ಕೆ.ಶಿವಕುಮಾರ ಅಧ್ಯಕ್ಷರಾಗಿದ್ದಾರೆ. ಹೀಗಿರುವಾಗ ನಾವು ಅಧ್ಯಕ್ಷರಾಗುತ್ತೇವೆ ಎನ್ನುವುದು ಸೂಕ್ತವಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸಮಯ ಬಂದಾಗ ನೋಡೋಣ” ಎಂದರು.
Laxmi News 24×7