Breaking News

ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ

Spread the love

ಬಂಟ್ವಾಳ: ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ರೂ. ಲೂಟಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್​ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ.

ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್​ನಲ್ಲಿ ಆಗಮಿಸಿದ ತಂಡ ದಿಡೀರ್ ದಾಳಿ ನಡೆಸಿದೆ.

ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ. ಮನೆಯಲ್ಲಿದ್ದ ಸುಮಾರು 30ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದೆ.


Spread the love

About Laxminews 24x7

Check Also

ಯುದ್ಧದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್.ಅಶೋಕ್

Spread the loveಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ