Breaking News

ಚಿತ್ರಸಂತೆ ಉದ್ಘಾಟಿಸಿದ ಸಿಎಂ:

Spread the love

ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಚಿತ್ರಸಂತೆ ಉದ್ಘಾಟಿಸಿದ ಸಿಎಂ

ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ಇಂದು ಆಯೋಜಿಸಿರುವ 22 ನೇ ಚಿತ್ರ ಸಂತೆಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಎಂ ಮಾತನಾಡಿದರು. ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ರಾಜ್ಯ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರ ಕಲಾ ಪರಿಷತ್ತು ಮಾಡುತ್ತಿದೆ ಎಂದ ಸಿದ್ದರಾಮಯ್ಯ ಅವರು ಚಿತ್ರಸಂತೆ ಆಯೋಜಿಸಿದ್ದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ