ವಿಜಯಪುರ, ಜನವರಿ 05: ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮುಹೂರ್ತ ಫಿಕ್ಸ್ ಆಗಿದ್ದು, ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
(KS Eshwarappa) ಮುಂದಾಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1008 ಸಾಧು ಸಂತರ ಪಾದ ಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ.
1 ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದ್ದಾರೆ.ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ ಕನಕ ಗುರುಪೀಠದ ತಿಂಥಣಿ ಶಾಖಾ ಮಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಉದ್ಘಾಟನೆ ಮಾಡುತ್ತಾರೆ.
ಜನವರಿ 12 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದ್ದಾರೆ.
Laxmi News 24×7