ಬೆಂಗಳೂರು, ಜನವರಿ 06: ನಗರದ ಮಾರತಹಳ್ಳಿಯಲ್ಲಿ ನೇಣಿಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು.
ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಟೆಕ್ಕಿ ವಿಚಾರ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳ ಅಂಗಳ ತಲುಪುವ ಮೂಲಕ ಸಂಚಲನ ಸೃಷ್ಟಿಸಿತ್ತು.
ಇದೀಗ ಈ ಪ್ರಕರಣವನ್ನು ರದ್ದುಕೋರಿ ನಿಖಿತಾ, ನಿಶಾ, ಅನುರಾಗ್, ಸುಶೀಲ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅತುಲ್ ಸುಭಾಪ್ ಪತ್ನಿ ಹಾಗೂ ಕುಟುಂಬದವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್, ಎಫ್ಐಆರ್ನಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಅಂಶಗಳಿವೆ
ಎಂದು ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ. ತನಿಖೆಯ ಸಂದರ್ಭದಲ್ಲಿ ಕಲೆಹಾಕಿದ ದಾಖಲೆಗಳನ್ನು 2 ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅಭಿಯೋಜಕರಿಗೆ ಹೈಕೋರ್ಟ್ ಸೂಚಿಸಿದೆ.
Laxmi News 24×7