Breaking News

ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,

Spread the love

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ನಂತರದ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.

ಮುಂದಿನ ಎರಡು ದಿನಗಳಲ್ಲಿ ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್​ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ