Breaking News

ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್​ಪ್ರೆಸ್ ರೈಲು

Spread the love

ಹುಬ್ಬಳ್ಳಿ : ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು, ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು- ಟುಟಿಕೋರಿನ್- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ.

ರೈಲು ಸಂಖ್ಯೆ 07319/07320 ಕೆಎಸ್ಆರ್ ಬೆಂಗಳೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು (1 ಟ್ರಿಪ್)

ರೈಲು ಸಂಖ್ಯೆ 07319 ಕೆಎಸ್ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 2025 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಕ್ಕೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

ಪುನಃ ಇದೆ ರೈಲು (07320) ಜನವರಿ 10, 2025 ರಂದು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಅಂಬೂರು, ಗುಡಿಯಾಟ್ಟಂ, ಕಟಪಾಡಿ, ಶೋಲಿಂಗೂರ್, ಅರಕ್ಕೋಣಂ, ತಿರುವಳ್ಳೂರು ಮತ್ತು ಪೆರಂಬೂರಿನಲ್ಲಿ ನಿಲ್ಲಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ