Breaking News

ಅಂಬೇಡ್ಕರ್​ ಕುರಿತ ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಇಂದು ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಕರೆ ಕೊಟ್ಟಿವೆ.

Spread the love

ಧಾರವಾಡ: ಡಾ.ಬಿ.ಆರ್‌.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ವಿರೋಧಿಸಿ ಇಂದು ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಧಾರವಾಡದ ಜುಬ್ಲಿ ವೃತ್ತದಲ್ಲಿ ವಾಹನಗಳನ್ನು ತಡೆದು ಪ್ರತಿಭಟಿಸಿ, ಅಮಿತ್ ಶಾ ವಿರುದ್ದ ಘೋಷಣೆ ಕೂಗಿದರು.

ಜುಬ್ಲಿ ವೃತ್ತಕ್ಕೆ ಬುಧವಾರ ರಾತ್ರಿಯೇ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಡಿಸಿಪಿಗಳಾದ ನಂದಗಾವಿ, ರವೀಶ ಮತ್ತು ಎಸಿಪಿ ಜೊತೆಗಿದ್ದರು. ಬಂದ್, ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ.ದಲಿತಪರ ಹೋರಾಟಗಾರ ಪರಮೇಶ್ವರ ಕಾಳೆ ಮಾತನಾಡಿ, ”ಅಂಬೇಡ್ಕರ್‌ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಧಾರವಾಡ, ಹುಬ್ಬಳ್ಳಿ ಬಂದ್​ಗೆ ಕರೆ ನೀಡಿದ್ದೇವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಅವಳಿ ನಗರವನ್ನು ಸಂಪೂರ್ಣ ಬಂದ್‌ ಮಾಡಲಾಗುವುದು. ಕನ್ನಡಪರ ಸಂಘಟನೆಗಳು, ರೈತಪರ ಸಂಘಟನೆಗಳು, ವ್ಯಾಪಾರಸ್ಥರು, ಹೋಟೆಲ್, ಬಾರ್ ಸೇರಿದಂತೆ ಶಾಲಾ-ಕಾಲೇಜ್‌ಗಳನ್ನು ಬಂದ್ ಮಾಡುವಂತೆ ಮನವಿ ಮಾಡಲಾಗಿದೆ. ಸ್ವಯಂಪ್ರೇರಣೆಯಿಂದ ಬಂದ್‌ಗೆ ಎಲ್ಲರೂ ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದೇವೆ. ಈಗಾಗಲೇ ಜಿಲ್ಲಾಡಳಿತ, ಪೊಲೀಸ್ ಆಯುಕ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿಡಿಪಿಐ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ” ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ