ಚಿಕ್ಕಬಳ್ಳಾಪುರ: ಬೋರ್‌ವೆಲ್ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ.
ಮಧ್ಯಪ್ರದೇಶ ಮೂಲದ ಮೂವರು ಕಾರ್ಮಿಕರಾದ ಅನದೇಶ್(25), ಜಗದೇವ್(21) ಹಾಗೂ ರಾಜಾರಾಮ್(26) ಮೃತ ದುರ್ದೈವಿಗಳು. ಲಾರಿ ತಮಿಳುನಾಡಿಗೆ ಸೇರಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
Laxmi News 24×7