Breaking News

ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ

Spread the love

ಹಾವೇರಿ: ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಕುಸುಮಾ (56) ಮತ್ತು ಕುಮಾರ (34) ಎಂದು ಗುರುತಿಸಲಾಗಿದೆ‌. ಮೃತರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದ ನಿವಾಸಿಗಳು. ಹಂಸಭಾವಿಯ ತಮ್ಮ ಸಂಬಂಧಿಕರ ಮನೆಗೆ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ