Breaking News

Big breaking: ಭದ್ರಾ ಮೇಲ್ದಂಡೆ ಯೋಜನೆ; ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಭರ್ಜರಿ ಗುಡ್‌ನ್ಯೂಸ್‌..!

Spread the love

ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆ ಮಾಡಲು ಷರತುಬದ್ಧ ಒಪ್ಪಿಗೆ ನೀಡಿದೆ.

 

128 ಎಕರೆ ಅರಣ್ಯ ಬಳಕೆಗೆ ಅನುಮತಿ

 

128 ಎಕರೆ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಬಳಕೆ ಮಾಡಬೇಕು. ಕಾಲುವೆಯ ಮೇಲೆ ಪ್ರತಿ 500 ಮೀಟ‌ರ್ ಅಂತರದಲ್ಲಿ ಮೇಲು ರಸ್ತೆ ನಿರ್ಮಿಸಲು ಷರತ್ತು ವಿಧಿಸಿದೆ. ಇದರಿಂದ ಚಿಂಕಾರ ವನ್ಯಜೀವಿಗಳು ಸುಲಲಿತವಾಗಿ ಓಡಾಡಲು ಅನುಕೂಲ ಆಗಲಿದೆ. ಕೇಂದ್ರ ಸರ್ಕಾರದ ಈ ಷರತ್ತಿಗೆ ಕರ್ನಾಟಕ ಒಪ್ಪಿಗೆ ನೀಡಿದೆ.

 

ಭದ್ರಾ ಮೇಲ್ದಂಡೆ ಯೋಜನೆಯಿಂದ ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ತುಮಕೂರಿನ ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ತಾಲ್ಲೂಕಿಗೆ ನೀರು ಸರಬರಾಜು ಆಗಲಿದೆ. ರೈತರ ಬೆಳೆಗಳಿಗೆ ಹನಿ ನೀರಾವರಿ ಮೂಲಕ ನೀರು ಪೂರೈಕೆ ಆಗಲಿದೆ. ಕೆರೆಗಳಿಗೆ ನೀರು ತುಂಬಿಸಿ, ಕೆರೆಗಳಿಂದ ನೀರನ್ನು ಪಂಪ್ ಮಾಡಿ, ಹನಿ ನೀರಾವರಿಗೆ ಬಳಕೆ ಮಾಡಲಾಗುತ್ತದೆ.

 

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ಜಮೀನುಗಳಿಗೆ ಹನಿ ನೀರಾವರಿ ವ್ಯವಸ್ಥೆ ಮಾಡಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ಶಾಶ್ವತ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಆ ಮೂಲಕ ಮಧ್ಯ ಕರ್ನಾಟಕದ ರೈತರ ದಶಕಗಳ ಹೋರಾಟ, ಕನಸು ನನಸಾಗುತ್ತಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ