Breaking News

ಗುಂಡಿನ ದಾಳಿಗೊಳಗಾದ ಕಾರು, ಉದ್ಯಮಿ ಪ್ರಪುಲ್ ಬಾಲಕೃಷ್ಣ ಪಾಟೀಲ

Spread the love

ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

 

ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್​​ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. ತಕ್ಷಣ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಎರಡು ಸುತ್ತು ಗುಂಡಿನ ದಾಳಿ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ದಾಳಿ ಮಾಡಿದವರು ಯಾರು‌‌? ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದಲೇ ಗೊತ್ತಾಗಬೇಕಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್‌

Spread the loveಬೆಂಗಳೂರು: ಪತಿಗಿಂತ  ಹೆಚ್ಚು ದುಡಿಯುವ ಪತ್ನಿಗೆ  ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ