Breaking News

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್​ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.

Spread the love

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.

 

ಪ್ರಜ್ವಲ್‌ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯ ಪೀಠ ಈ ಆದೇಶ ನೀಡಿದೆ.

 

ಅರ್ಜಿದಾರರು ಮತ್ತು ಪ್ರಾಸಿಕ್ಯೂಷನ್‌ ವಕೀಲರ ವಾದವನ್ನು ನ್ಯಾಯಾಲಯ ಆಲಿಸಬಹುದು. ಪ್ರಕರಣ ಸಂಬಂಧ ಆರೋಪ ನಿಗದಿಗೂ ಮುನ್ನ ವಾದ ಆಲಿಸುವ ಪ್ರಕ್ರಿಯೆಯನ್ನು ವಿಚಾರಣಾಧೀನ ನ್ಯಾಯಾಲಯ ನಡೆಸಬಹುದು. ಆದರೆ, ಮುಂದಿನ ವಿಚಾರಣೆವರೆಗೆ ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಪೀಠ ಮುಂದೂಡಿತು.

 

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಚಾರಣಾಧೀನ ನ್ಯಾಯಾಲಯದಲ್ಲಿ ತಮ್ಮನ್ನು ಸಮರ್ಥಿಸಿಕೊಳ್ಳಲು ತನ್ನ ಕಾರು ಚಾಲಕನಿಂದ ಜಪ್ತಿ ಮಾಡಿರುವ ಮೊಬೈಲ್‌ನಿಂದ ಪಡೆದಿರುವ ಎಲ್ಲಾ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ