Breaking News

ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್‌: ಗ್ರಾಮ ತೊರೆದ ನೂರಾರು ಕುಟುಂಬಗಳು

Spread the love

ಚಾಮರಾಜನಗರ, ಜನವರಿ 10: ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ (Microfinance) ಕಂಪನಿಗಳ ಕಿರುಕುಳ ಮಿತಿ ಮೀರಿದೆ.

ಇವರ ಕಿರುಕುಳ ತಾಳಲಾರದೆ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ. ಈ ಫೈನಾನ್ಸ್​ಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಆ ಮೂಲಕ ಗಡಿ ನಾಡು ಚಾಮರಾಜನಗರದಲ್ಲಿ ಎಗ್ಗಿಲ್ಲದೆ ಕರಾಳ ದಂಧೆ ಸಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.ಹೌದು.. ಕೆಲವು ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ.

ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು ಆಧಾರ್ ಕಾರ್ಡ್ ಜೆರಾಕ್ಸ್ ಪಡೆದು ಸುಲಭವಾಗಿ ಸಾಲ ನೀಡುತ್ತಿವೆ. ಸುಲಭವಾಗಿ ಸಾಲ ಸಿಗುತ್ತೆ ಎಂಬ ಕಾರಣಕ್ಕೆ ಕೂಲಿ ಕಾರ್ಮಿಕರು,

ಮಹಿಳೆಯರು ಇವರ ಸಾಲದ ಜಾಲಕ್ಕೆ ಬಿದ್ದು ದೈನಂದಿನ ವ್ಯವಹಾರಗಳಿಗೆ ಸಾಲ ಪಡೆಯುತ್ತಿದ್ದಾರೆ. ಬಡ್ಡಿಯೊಂದಿಗೆ ವಾರದ ಕಂತು, ತಿಂಗಳ ಕಂತು ಹೀಗೆ ಸಾಲ ತೀರಿಸುತ್ತಾರೆ. ಆದರೆ ಸಾಲ ಮರುಪಾವತಿ ಮಾಡುವುದು ಒಂದು ದಿನ ತಡವಾದರೂ ಹೊತ್ತಲ್ಲದ ಹೊತ್ತಿನಲ್ಲಿ ಕಿರುಕುಳ ನೀಡುತ್ತಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ