Breaking News

ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ.

Spread the love

ಬೆಂಗಳೂರು: ವಿದ್ಯಾರ್ಥಿಗಳು ಬಹಳ ಕಾತರದಿಂದ ನಿರೀಕ್ಷಿಸುತ್ತಿದ್ದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷೆಯ ದಿನಾಂಕಗಳನ್ನು ಇಂದು ಘೋಷಣೆ ಮಾಡಿದೆ.

ಪರೀಕ್ಷೆ – 1ರ ವೇಳಾಪಟ್ಟಿ ಇದಾಗಿದ್ದು, 10ನೇ ತರಗತಿ ಪರೀಕ್ಷೆ ಮಾರ್ಚ್ 21 ರಿಂದ ಆರಂಭಗೊಂಡು ಏಪ್ರಿಲ್ 4 ಕ್ಕೆ ಅಂತ್ಯಗೊಳ್ಳಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ ಪ್ರಾರಂಭಗೊಂಡು ಮಾರ್ಚ್ 20 ರಂದು ಅಂತ್ಯಗೊಳ್ಳಲಿದೆ. 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್​​​ನಲ್ಲಿ ಸಹ ಪ್ರಕಟಿಸಲಾಗಿದೆ.

ಎಸ್​​ಎಸ್​​ಎಲ್​​ಸಿ ಪರೀಕ್ಷೆ – 1 ರ ವೇಳಾಪಟ್ಟಿ ಹೀಗಿದೆ.

ಮಾರ್ಚ್ 21 – ಪ್ರಥಮ ಭಾಷೆ (ಕನ್ನಡ, ಸಂಸ್ಕೃತ, ಹಿಂದಿ, ಉರ್ದು, ಇತ್ಯಾದಿ)

ಮಾರ್ಚ್ 24 – ಗಣಿತ

ಮಾರ್ಚ್ 26 – ದ್ವಿತೀಯ ಭಾಷೆ (ಇಂಗ್ಲಿಷ್​​, ಕನ್ನಡ)

ಮಾರ್ಚ್ 29 – ಸಮಾಜ ವಿಜ್ಞಾನ

ಏಪ್ರಿಲ್ 2 – ವಿಜ್ಞಾನ

ಏಪ್ರಿಲ್ 4 – ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

ಮಾರ್ಚ್ 1 – ಕನ್ನಡ, ಅರೇಬಿಕ್

ಮಾರ್ಚ್ 3 – ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ಮಾರ್ಚ್ 5 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 7 – ಇತಿಹಾಸ, ಭೌತಶಾಸ್ತ್ರ

ಮಾರ್ಚ್ 10 – ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12 – ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

ಮಾರ್ಚ್ 13 – ಅರ್ಥಶಾಸ್ತ್ರ

ಮಾರ್ಚ್ 15 – ಇಂಗ್ಲಿಷ್

ಮಾರ್ಚ್ 17 – ಭೂಗೋಳಶಾಸ್ತ್ರ

ಮಾರ್ಚ್ 18 – ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 19 – ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್

ಮಾರ್ಚ್ 20 – ಹಿಂದಿ

ಪರೀಕ್ಷೆ ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆ ನಡೆಯಲಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ