ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕರಂಬಳ, ಚಾಪಗಾಂವ್ ಸೇರಿ ಹಲವೆಡೆ ಕಾಡಾನೆ ಹಾವಳಿಗೆ ರೈತರು ನಲುಗಿ ಹೋಗಿದ್ದರು. ಕಬ್ಬು ಮತ್ತಿತರ ಬೆಳೆಗಳನ್ನು ಆನೆ ಹಾಳು ಮಾಡುತ್ತಿದ್ದುದರಿಂದ ಕಂಗಾಲಾಗಿದ್ದರು.
ಕಾಡಾನೆ ಹಾವಳಿಗೆ ಕಂಗೆಟ್ಟಿದ್ದ ಖಾನಾಪುರದ ರೈತರಿಗೆ ಇದೀಗ ಮುಕ್ತಿ ಸಿಕ್ಕಿದೆ ಎನ್ನಬಹುದು. ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಬಂದಿದ್ದ ನುರಿತ ಆನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆ ಹಿಡಿಯಲಾಯಿತು.
ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ನಿನ್ನೆ (ಗುರುವಾರ) ಬೆಳಿಗ್ಗೆಯಿಂದ ಸಂಜೆಯವರೆಗೂ ಸೆರೆ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಖಾನಾಪುರ ಆರ್ಎಫ್ಓ ಶ್ರೀಕಾಂತ್ ಪಾಟೀಲ, ನಂದಗಡ ವಲಯ ಅರಣ್ಯ ಅಧಿಕಾರಿ ಮಾಧುರಿ ದಳವಾಯಿ ಸೇರಿದಂತೆ ಹಲವು ಸಿಬ್ಬಂದಿ ಭಾಗಿಯಾಗಿದ್ದರು.
Laxmi News 24×7