Breaking News

ಕಂಬಳೋತ್ಸವವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಮಂಗಳೂರು : ”ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮದು ಬಹುತ್ವದ ದೇಶ‌” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಜನಪದ ಕ್ರೀಡೆ ಕಂಬಳ ಸರ್ವ ಜಾತಿ, ಧರ್ಮದ ಜನ ಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಕರಾವಳಿ ಜಿಲ್ಲೆಗಳ ಒಂದು ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ” ಎಂದರು.

”ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ” ಎಂದು ತಿಳಿಸಿದರು.’ತಮ್ಮ ಮನೆ ಮಕ್ಕಳಂತೆ ಕಂಬಳ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ, ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ. 24 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ” ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ