Breaking News

ಅನಾವಶ್ಯಕವಾಗಿ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ:ಹೆಚ್​.ಸಿ. ಮಹದೇವಪ್ಪ

Spread the love

ಮೈಸೂರು: “ಸಿಎಂ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ” ಎಂದು ಸಚಿವ ಹೆಚ್​.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೂಗಾಟ, ಚರ್ಚೆ ಏನು ಇಲ್ಲ. ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅನಾವಶ್ಯಕವಾಗಿ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ ಅಷ್ಟೇ” ಎಂದರು.

ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿರುವ ವಿಚಾರ ಕುರಿತು ಮಾತನಾಡಿದ ಅವರು, “ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದರ ಬಗ್ಗೆ ಚರ್ಚೆ ಮಾಡುವುದಕ್ಕೆ ಸಭೆ ಕರೆಯಲಾಗಿದೆ. ಸುರ್ಜೇವಾಲಾ ಕೂಡ ಸಭೆಗೆ ಬರುತ್ತಿದ್ದಾರೆ. ಇದು ಯಾವುದೇ ಶಕ್ತಿ ಪ್ರದರ್ಶನ ಅಲ್ಲ” ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ